جَزَآؤُهُمْ عِندَ رَبِّهِمْ جَنَّٰتُ عَدْنٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَآ أَبَدًا رَّضِىَ ٱللَّهُ عَنْهُمْ وَرَضُوا۟ عَنْهُ ذَٰلِكَ لِمَنْ خَشِىَ رَبَّهُۥ
Kannada Translation - Hamza Buturಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿರುವ ಪ್ರತಿಫಲವು ಶಾಶ್ವತವಾಸದ ಸ್ವರ್ಗೋದ್ಯಾನಗಳಾಗಿವೆ. ಅವುಗಳ ತಳಭಾಗದಿಂದ ನದಿಗಳು ಹರಿಯುತ್ತವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಇದು ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವನಿಗೆ ಇರುವುದಾಗಿದೆ.